ಕೋರೊನಾ ಭಾರತೀಯ ರೂಪಾಂತರ ಉಲ್ಲೇಖಿತ ಪೋಸ್ಟ್‌ಗಳನ್ನು ತೆಗೆಯಲು ಸಾಮಾಜಿಕಮಾಧ್ಯಮಗಳಿಗೆ ಸೂಚನೆ

‘ಭಾರತೀಯ ರೂಪಾಂತರ’ ಕೊರೊನಾ ವೈರಸ್ ವಿವಿಧ ದೇಶಗಳಲ್ಲಿ ಹರಡುತ್ತಿದೆ ಎಂದು ಸೂಚಿಸುವ ಮೂಲಕ ಆನ್‌ಲೈನ್‌ನಲ್ಲಿ ಸುಳ್ಳು ಹೇಳಿಕೆಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಪ್ಯಾಂಡೆಮಿಕ್‌ಗಿಂತ ಇನ್ಫೋಡೆಮಿಕ್‌ ಅಪಾಯಕಾರಿ. ಒಂದು ವಿಷಯಕ್ಕೆ ಸಂಬಂಧಿಸಿದಂತೆ ವಿಫುಲವಾಗಿ ಮಾಹಿತಿ ಹರಡಲಾಗುತ್ತಿದ್ದು, ಇದು ಅಪಾಯಕಾರಿ ಎಂಬ ಮಾತು ಇತ್ತೀಚೆಗೆ ಹೆಚ್ಚು ಚರ್ಚಿತವಾಗುತ್ತಿದೆ. ಇದರಿಂದ ಜನರಿಗೆ ತಪ್ಪು ಮಾಹಿತಿ ತಲುಪುವ ಸಾಧ್ಯತೆ ಹೆಚ್ಚು ಎಂಬ ಕಾಳಜಿಯೂ ವ್ಯಕ್ತವಾಗುತ್ತಿದೆ.

ಕೋವಿಡ್‌ -19ರ ಸಂದರ್ಭದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಸುಳ್ಳು ಸುದ್ದಿಯನ್ನು ತಡೆಯಲೆಂದು ಕೇಂದ್ರ ಸರ್ಕಾರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಕೊರೊನಾವೈರಸ್‌ ಭಾರತೀಯ ರೂಪಾಂತರಿಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ನೋಟಿಸ್‌ ನೀಡಿದೆ.

ಮೂಲಗಳ ಪ್ರಕಾರ, ಮಾಹಿತಿ ತಂತ್ರಜ್ಞಾನ ಸಚಿವಾಲಯವು ಎಲ್ಲ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಪತ್ರ ಬರೆದಿದ್ದು, ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ‘ಭಾರತೀಯ ರೂಪಾಂತರ’ ಎಂಬ ಪದವನ್ನು ತನ್ನ ಯಾವುದೇ ವರದಿಯಲ್ಲಿ ಕೊರೊನಾ ವೈರಸ್‌ನ ಬಿ .1.617 ರೂಪಾಂತರದೊಂದಿಗೆ ಸಂಯೋಜಿಸಿಲ್ಲ’ ಎಂದು ಪ್ರತಿಪಾದಿಸಿದೆ.

ಈ ನಿಟ್ಟಿನಲ್ಲಿ ಐಟಿ ಸಚಿವಾಲಯವು, ಶುಕ್ರವಾರ ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ನೋಟಿಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ.

‘ಭಾರತೀಯ ರೂಪಾಂತರ’ ಕೊರೊನಾ ವೈರಸ್ ವಿವಿಧ ದೇಶಗಳಲ್ಲಿ ಹರಡುತ್ತಿದೆ ಎಂದು ಸೂಚಿಸುವ ಮೂಲಕ ಆನ್‌ಲೈನ್‌ನಲ್ಲಿ ಸುಳ್ಳು ಹೇಳಿಕೆಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ವಿಷಯವನ್ನು ಈಗಾಗಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮೇ 12 ರಂದು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟಪಡಿಸಿದೆ ಎಂದು ಮೂಲಗಳು ತಿಳಿಸಿವೆ.

‘ನಿಮ್ಮ ವೇದಿಕೆಯಿಂದ ಕೊರೊನಾ ವೈರಸ್‌ನ ‘ಭಾರತೀಯ ರೂಪಾಂತರ’ ವೆಂದು ಹೆಸರಿಸುವ, ಸೂಚಿಸುವ ಅಥವಾ ಈ ಸಂಬಂಧಿತ ಎಲ್ಲ ಕಂಟೆಂಟ್‌ಗಳನ್ನು ತಕ್ಷಣವೇ ತೆಗೆದುಹಾಕಬೇಕೆಂದು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಕೇಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕೊರೊನಾ ವೈರಸ್‌ಗೆ ಸಂಬಂಧಿಸಿದ ಸುಳ್ಳು ಸುದ್ದಿ / ತಪ್ಪು ಮಾಹಿತಿಯನ್ನು ನಿಗ್ರಹಿಸುವ ಬಗ್ಗೆ ಸಲಹೆಗಳನ್ನು ನೀಡಿತ್ತು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.